
ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ : ಡಿಕೆಶಿ
ಬೆಂಗಳೂರು, ಆ. 8- ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುತ್ತೇವೆ.ಈ ಬಗ್ಗೆ ಕೇಂದ್ರ ಸಚಿವ ರಿಜಿಜು ತಲೆ ಕೆಡಿಸಿಕೊಳ್ಳುವುದು ಬೇಡ.ಅವರು ಅವರ ಪಕ್ಷದ ನೀತಿ ನಿಲುವುಗಳ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿAದು ದಿ.ಮುಖ್ಯಮಂತ್ರಿ ರಾಷ್ಟç ನಾಯಕ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ದಿನವಾದ ಇಂದು ವಿಧಾನಸೌಧದ ಅವರಣದಲ್ಲಿರುವ ಎಸ್ .ನಿಜಲಿಂಗಪ್ಪ ಅವರ ಪ್ರತಿಮೆಗೆ ಪುಪ್ಪ ನಮನ ಸಲ್ಲಿಸಿ ಮಾತನಾಡಿ ಸಂಪುಟದಲ್ಲಿ ಮಹಿಳೆಯರು ಇದ್ದೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು,
ಕೇಂದ್ರ ಸಚಿವ ರಿಜಿಜು ಅವರು, ರಾಹುಲ್ ಗಾಂಧಿ ಮಹಿಳಾ ಮೀಸಲಾತಿ,ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ಸಚಿವರೇ ಇಲ್ಲ ಎಂದು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಸಬಲೀಕರಣದಲ್ಲಿ ನಾವು ಹೆಚ್ಚು ಕೆಲಸ ಮಾಡಿದ್ದೇವೆ.ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದೇವೆ,ರಿಜಿಜು ಅವರು ಕಾಂಗ್ರೆಸ್ ಸರ್ಕಾರದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ನಾವು ಎಲ್ಲವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು.
ಕೆಲ ಸಚಿವರ ತ್ಯಾಗದ ಸೂತ್ರದ ಬಗ್ಗೆ ಪ್ರತಿಕ್ರಿಯಿಸದ ಡಿ.ಕೆ.ಶಿವಕುಮಾರ್ ಅವರು, ದೆಹಲಿಗೆ ತೆರಳುತ್ತಿದ್ದೀರಾ ಎಂಬ ಪ್ರಶ್ನೆಗೆ ,ನಾನು ದೆಹಲಿಗೆ ಹೋಗಬೇಕಾಲ್ಲ, ನಾನು ನಿಮಗೆ ಹೇಳಿಯೇ ಹೋಗುತ್ತೇನೆ ಎಂದು ಚುಟುಕಾಗಿ ಉತ್ತರಿಸಿ ದೆಹಲಿ ಭೇಟಿಯ ಗುಟ್ಟನ್ನು ಬಿಟ್ಟುಕೊಡಲಿಲ್ಲ.
