Latestಬೆಂಗಳೂರು-Bengaluruರಾಜ್ಯ-Karnataka

ಕರ್ನಾಟಕ ಹೈಕೋರ್ಟ್‌ನ ಆರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಆರು ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಹಾಗೂ ಅಧಿಕೃತ ಸಮಾರಂಭದಲ್ಲಿ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು.

ಪ್ರಮಾಣ ವಚನ ಸ್ವೀಕರಿಸಿದ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳು:
ರಾಘವೇಂದ್ರ ಸೀತಾರಾಂ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ್ ಪ್ರಮೋದ್ ಹೊಂಬೇಗೌಡ ಶಾಂತಿ ಭೂಷಣ್, ನೂತನವಾಗಿ ಕರ್ತವ್ಯಕ್ಕೆ ಹಾಜರಾದ ಎಲ್ಲಾ ಹೆಚ್ಚುವರಿ ನ್ಯಾಯಮೂರ್ತಿಗಳಿಗೂ ಶುಭಾಶಯಗಳನ್ನು ಕೋರಲಾಗಿದೆ.

Share with Friends
author avatar
Digital Desk