
ಆ.13ರ ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳಲ್ಲೇ ಮೂಡದ ಒಮ್ಮತ
ಬೆಂಗಳೂರು: ಆಗಸ್ಟ್ 13ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳಲ್ಲೇ ಒಮ್ಮತ ಮೂಡಿಲ್ಲ. ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸದಿದ್ದರೆ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ಯಾವುದೇ ಕಾರಣಕ್ಕೂ ಬಂದ್ ನಡೆಸೇ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದರ ನಡುವೆ ಕರ್ನಾಟಕ ಬಂದ್‌ಗೆ ತಮ್ಮ ಬೆಂಬಲವಿಲ್ಲ ಎಂದು ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ್ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 13ರಂದು ನಡೆಯಲಿರುವ ಹೋರಾಟದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕಾವೇರಿ ಹಾಗೂ ಕಬಿನಿ ಜಲಾಶಯಗಳಲ್ಲಿ ಸದ್ಯ ನೀರಿನ ಮಟ್ಟ ಉತ್ತಮವಾಗಿದ್ದು, ಪರಿಸ್ಥಿತಿ ಸುಧಾರಿಸಿದೆ. ಹೀಗಾಗಿ ಈ ಸಂದರ್ಭದಲ್ಲಿ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಸಾ.ರಾ. ಗೋವಿಂದ್ ಹೇಳಿದ್ದಾರೆ.
ಈ ಮೂಲಕ ಆಗಸ್ಟ್ 13ರ ಬಂದ್ ವಿಚಾರದಲ್ಲಿ ಕನ್ನಡಪರ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯ ಬಹಿರಂಗವಾಗಿದ್ದು, ಬಂದ್ ಯಶಸ್ವಿಯಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.
