
ಪುಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್ ..!
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪುಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಹಾಗೂ ಡೈರಿ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಈ ಕುರಿತು ಬೆಂಗಳೂರು ಎಲೆಕ್ಟ್ರಾನಿಕ್ಸ್ ಸಿಟಿ ಡಿಸಿಪಿ ಎಂ.ನಾರಾಯಣಅವರು ಪ್ರತಿಕ್ರಿಯೆ ನೀಡಿದ್ದು, ಆಗಸ್ಟ್ 11ರಂದು ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೇಲೆ ನಡೆಸಿದ ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌ನಲ್ಲಿ ವಿಡಿಯೋಗಳಿವೆ ಎಂಬ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.
ತನಿಖೆಯ ಪ್ರಮುಖ ಅಂಶಗಳು
- ಸೀಜ್ ಮಾಡಿ FSLಗೆ: ಜೈಲಿನಲ್ಲಿ ಸಿಕ್ಕ ನಿಷೇಧಿತ ವಸ್ತುಗಳನ್ನು ಸೀಜ್ ಮಾಡಲಾಗಿದ್ದು, ಸೀಲ್ ಮಾಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಸೀಲ್ಡ್ ಕವರ್ನಲ್ಲಿರುವ ಎಲ್ಲಾ ವಸ್ತುಗಳನ್ನು FSL ಪರೀಕ್ಷೆಗೆ ಕಳುಹಿಸಲಾಗುತ್ತೆ.
- ಪಾಸ್‌ವರ್ಡ್ ನೀಡಿಲ್ಲ: ಆರೋಪಿಗಳು ಸಿಕ್ಕ ಮೊಬೈಲ್‌ನ ಪಾಸ್‌ವರ್ಡ್ ಅನ್ನು ಇನ್ನೂ ಹೇಳಿಲ್ಲ. ಫೋನ್ ಯಾರು ಬಳಸುತ್ತಿದ್ದರು ಎಂಬುದು ತನಿಖೆಯಲ್ಲಿ ಗೊತ್ತಾಗಲಿದೆ.
3.ಮೊಬೈಲ್ ಹೇಗೆ ಒಳಗೆ ಬಂತು?: ಮೊಬೈಲ್ ಜೈಲಿನೊಳಗೆ ಹೇಗೆ ಬಂತು ಎಂಬ ಕುರಿತು ತನಿಖೆ ನಡೆಯುತ್ತಿದೆ. ಜೈಲು ಸಿಬ್ಬಂದಿ ಪಾತ್ರವಿದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತವಿಚಾರಣೆ ಇನ್ನೂ ಆಗಿಲ್ಲ
ಡಿಸಿಪಿ ನಾರಾಯಣ ಅವರು,ಪುಜ್ವಲ್ ರೇವಣ್ಣ ಹಾಗೂ ಪ್ರತಾಪ್ ರೈ ಅವರನ್ನು ಇನ್ನೂ ವಿಚಾರಣೆ ನಡೆಸಿಲ್ಲ. ಟೆಕ್ನಿಕಲ್ ಸಾಕ್ಷ್ಯಾಧಾರಗಳು FSLನಿಂದ ಬಂದ ಬಳಿಕ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತದೆಎಂದು ತಿಳಿಸಿದರು.
ಒಟ್ಟಾರೆ ಜೈಲಿನಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾಗಿರುವುದು ಜೈಲು ಆಡಳಿತದ ಭದ್ರತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ತನಿಖೆ ಚುರುಕುಗೊಂಡಿದೆ
