
ಪ್ರಿಯಾಂಕ್ ಖರ್ಗೆಯವರ ನೇತೃತ್ವದಲ್ಲಿ ಧ್ವಜಾರೋಹಣ;
ಕಲಬುರಗಿ : ಕಲಬುರಗಿ ನಗರದ ಡಿ. ಎ.ಆರ್ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಆಚರಿಸಲಾಯಿತು .ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಂದ ಧ್ವಜಾರೋಹಣವನ್ನು ಮಾಡಿಸಲಾಯಿತು .ದೇಶದ ಎಲ್ಲೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಯಲಿದ್ದಾರೆ .
ಪ್ರಿಯಾಂಕ್ ಖರ್ಗೆ ಯವರ ಉಪಸ್ಥಿತಿಯಲ್ಲಿ ತೆರೆದ ವಾಹನದಲ್ಲಿ ಪರಿವೀಕ್ಷಣೆ ಮಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆರವರು ಹಾಗು ಕಲಬುರಗಿ ಪೊಲೀಸರಿಂದ ಗೌರವ ವಂದನೆಯನ್ನು ಮಾಡಲಾಯಿತು .

ಈ ಕಾರ್ಯಕ್ರಮದಲ್ಲಿ ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ್,ಕನೀಜ್ ಫಾತೀಮಾ ಸೇರಿದಂತೆ ಹಲವರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು . ಪೊಲೀಸರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 10ಕ್ಕೂ ಹೆಚ್ಚು ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
ಧ್ವಜಾರೋಹಣದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಗೌರವ ವಂದನೆ ಸ್ವೀಕರಿಸಿದರು. ಪಥಸಂಚಲನದ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಶಿಸ್ತುಬದ್ಧ ಹೆಜ್ಜೆ ಹಾಕುವಿಕೆ ಪ್ರೇಕ್ಷಕರ ಗಮನ ಸೆಳೆಯಿತು.
ಒಟ್ಟಾರೆ, ಕಲಬುರಗಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
