
80ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿ ಆಚರಣೆ – ಎ.ಸಿ. ಸುಭಾಷ್ ಸಂಪಗಾವಿ ಅವರಿಂದ ಧ್ವಜಾರೋಹಣ
ಚಿಕ್ಕೋಡಿ: ದೇಶದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಇದರ ಪ್ರಯುಕ್ತ ಚಿಕ್ಕೋಡಿ ತಾಲೂಕಿನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿಯ ಉತ್ಸಾಹದಿಂದ ಆಚರಿಸಲಾಯಿತು.
ಚಿಕ್ಕೋಡಿಯ ಆರ್.ಡಿ. ಕಾಲೇಜ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಸಿ. ಸುಭಾಷ್ ಸಂಪಗಾವಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ನಂತರ ಸಚಿವ ಎ.ಸಿ. ಸುಭಾಷ್ ಸಂಪಗಾವಿ ಅವರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. ಬಳಿಕ ಪೊಲೀಸ್ ಇಲಾಖೆಯ ಪರೇಡ್ನಿಂದ ಗೌರವ ವಂದನೆಯನ್ನುಸ್ವೀಕರಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ವಿವಿಧ ಸಂಘಟನೆಗಳ ತಂಡಗಳು ಪಥಸಂಚಲನ ನಡೆಸಿದವು. ದೇಶಭಕ್ತಿ ಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಿಕರ ಮನಸ್ಸನ್ನು ಸೂರೆಗೊಂಡವು.
ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಶಾಸಕ ಗಣೇಶ್ ಹುಕ್ಕೇರಿ, ತಹಶೀಲ್ದಾರ್ ರಾಜೇಶ್ ಬುರ್ಲಿಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು, ಶಿಕ್ಷಕರು ಮತ್ತು ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎ.ಸಿ. ಸುಭಾಷ್ ಸಂಪಗಾವಿ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಇಡೀ ಮೈದಾನವು “ಭಾರತ್ ಮಾತಾ ಕಿ ಜೈ” ಘೋಷಣೆಗಳಿಂದ ಮಾರ್ದನಿಸಿತು.
