
ಮುದಗಲ್ ಪುರಸಭೆಯಲ್ಲಿ ಅದ್ಧೂರಿ ಸ್ವಾತಂತ್ರ್ಯೋತ್ಸವ ಆಚರಣೆ..
ಮುದಗಲ್: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪುರಸಭೆಯ ಮುಖ್ಯಾಧಿಕಾರಿ ಪ್ರವೀಣ್ ಬೋಗಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪುರಸಭೆಯ ಗಣ್ಯರು, ವಿವಿಧ ಮುಖಂಡರು, ಮಾಜಿ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಸೇರಿದಂತೆ ಹಲವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಸ್ವಾತಂತ್ರ್ಯಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ದೇಶದ ಏಕತೆ, ಅಖಂಡತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಸಂಕಲ್ಪದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪುರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಪರಸ್ಪರ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
