
ಕೋಲಾರದಲ್ಲಿ ಧ್ವಜಾರೋಹಣ ವೇಳೆ ಖಡ್ಗ ಪ್ರದರ್ಶನ : ವಿಡಿಯೋ ವೈರಲ್
ಕೋಲಾರ: ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಖಡ್ಗ ಪ್ರದರ್ಶಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ಪಾರ್ಕ್‌ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕೆಲವರು ಖಡ್ಗಗಳನ್ನು ಪ್ರದರ್ಶಿಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಖಡ್ಗ ಹಿಡಿದು ಪ್ರದರ್ಶನ ನೀಡಿದ ಬಳಿಕ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡಿರುವ ದೃಶ್ಯಗಳು ವಿಡಿಯೋದಲ್ಲಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಚರ್ಚೆ ಆರಂಭವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸಿ, ಖಡ್ಗ ಪ್ರದರ್ಶನಕ್ಕೆ ಕಾರಣ ಹಾಗೂ ಕಾರ್ಯಕ್ರಮದ ಹಿನ್ನೆಲೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.
