LatestTop Storiesಹಾವೇರಿ-Haveri

ಸಚಿವ ಬಿ. ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ – ಡಿಸಿ ಕಚೇರಿ ಮುತ್ತಿಗೆಗೆ ಯತ್ನ

ಹಾವೇರಿ: ಸಚಿವ ಬಿ. ನಾಗೇಂದ್ರ ವಿರುದ್ಧ ಬಿಜೆಪಿ ಧರಣಿ ನಡೆಸಿದೆ. ಸಚಿವ ಸಂಪುಟದಿಂದ ಬಿ. ನಾಗೇಂದ್ರನನ್ನು ವಜಾ ಮಾಡುವಂತೆ ಪಟ್ಟು ಹಿಡಿದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೂಟಿ ಶಾಸಕನಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಹಾವೇರಿ DC ಕಚೇರಿ ಮುಂದೆ ನೂರಾರು ಬಿಜೆಪಿ ಕಾರ್ಯಕರ್ತರುಜಮಾಯಿಸಿ ಧರಣಿ ನಡೆಸಿದರು.

ಪ್ರತಿಭಟನೆ ವೇಳೆ ಡಿಸಿ ಕಚೇರಿ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಸಚಿವ ನಾಗೇಂದ್ರ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Share with Friends
author avatar
Digital Desk