ಜಿಲ್ಲಾ ಸುದ್ದಿಗಳು | District Newsಹಾವೇರಿ-Haveri

ಹಾವೇರಿ : ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಹಾವೇರಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬ್ಯಾಡಗಿ ತಾಲೂಕಿನ ಕಲ್ಲದೇವರು ಗ್ರಾಮದಲ್ಲಿ ನಡೆದಿದೆ.

ಬ್ಯಾಡಗಿ–ಕಲ್ಲದೇವರು ಮಾರ್ಗದಲ್ಲಿ ಬಸ್ ಸಂಚಾರದ ರೂಟ್ ಬದಲಾವಣೆ ಮಾಡಲಾಗಿದ್ದು, ಕಲ್ಲದೇವರು ಗ್ರಾಮ ದಾಟಿ ಕುರುಕುಂದ ಗ್ರಾಮಕ್ಕೆ ಬಸ್‌ಗಳು ಸಂಚರಿಸುತ್ತಿವೆ. ಇದರಿಂದ ಕಲ್ಲದೇವರು ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಚಾರ ಸಮಸ್ಯೆ ಎದುರಾಗಿದೆ.

ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಎದುರು ಕುಳಿತು ಪ್ರತಿಭಟನೆ ನಡೆಸಿ, ಕುರುಕುಂದ ಗ್ರಾಮಕ್ಕೆ ಪ್ರತ್ಯೇಕವಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಗ್ರಾಮಸ್ಥರೂ ಸಾಥ್ ನೀಡಿದರು. ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Share with Friends
author avatar
Digital Desk