LatestTop Storiesಬೆಂಗಳೂರು-Bengaluru

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ – ಬಾಯಿಯಲ್ಲಿ ಚಿನ್ನ ಸಾಗಾಟಕ್ಕೆ ಯತ್ನ

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ.

ದುಬೈನಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮನವಾಗಿದ್ದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಸ್ಟಮ್ ಅಧಿಕಾರಿಗಳ ತಪಾಸಣೆ ನಡೆದಿದೆ.

ಕಳ್ಳಸಾಗಣೆಗೆ ಯತ್ನಿಸಿದ ಆರೋಪಿಯನ್ನು ಮೊಹಮ್ಮದ್ ಸಿರಾಜ್ಎಂದು ಗುರುತಿಸಲಾಗಿದೆ. ಆರೋಪಿ ಬಾಯಿಯಲ್ಲಿ ಚಿನ್ನದ ಎರಡು ಕ್ಯಾಪ್ಸುಲ್ ಸಾಗಾಟಕ್ಕೆ ಯತ್ನ ಮಾಡಿದ್ದಾನೆ.

82 ಗ್ರಾಂ ತೂಕದ ಕ್ಯಾಪ್ಸುಲ್ ಸಾಗಣೆ ಮಾಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆರೋಪಿ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ಪ್ರಯಾಣ ಬೆಳೆಸಲು ಟಿಕೆಟ್ ಬುಕ್ ಮಾಡಿದ್ದ. ಈ ವೇಳೆ ಸ್ಕ್ರೀನಿಂಗ್ ಮಾಡುವಾಗ ಸಿಕ್ಕಿಬಿದ್ದ ಆರೋಪಿ.

ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ನೀಡಿದ ಕಸ್ಟಮ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಈ ಪ್ರಕರಣ ದಾಖಲಾಗಿದೆ.

Share with Friends
author avatar
Digital Desk