
24 ರಂದು ನಾಪತ್ತೆಯಾಗಿದ್ದ ತಾಯಿ, 5 ಮಕ್ಕಳು ಶವವಾಗಿ ಪತ್ತೆ
ವಿಜಯಪುರ:24 ರಂದು ಮಿಸ್ಸಿಂಗ್ ಆದವರು ಶವವಾಗಿ ಪತ್ತೆ ಯಾಗಿರುವ ಹೃದಯ ವಿದಾರಕ ಘಟನೆ ವಿಜಯಪುರದಲ್ಲಿ ನಡೆದಿದೆ.ಮೃತರು ವಿಜಯಪುರ ತಾಲೂಕಿನ ತೊರವಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಮೃತರು: ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7), ವಿಕಾಸ (5)
ತಾಯಿ ಸೇರಿದಂತೆ ಐದು ಮಕ್ಕಳು ಸೇರಿ ಒಟ್ಟು ಆರು ಜನರು ಶವವಾಗಿ ಪತ್ತೆಯಾಗಿದ್ದಾರೆ.ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗಂಡ ಮಲಕಾರಿ ಭೀಮರಾಯ ಜಾಲಗೇರಿ ಜೊತೆಗೆ ಜಗಳವಾಗಿತ್ತುಎಂದು ತಿಳಿದುಬಂದಿದೆ.
ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಬಂದಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದ್ದು, 24 ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
