EntertainmentLatestಸ್ಯಾಂಡಲ್​ವುಡ್-Sandalwood

ಹುಟ್ಟುಹಬ್ಬದ ಆಚರಣೆ ಕುರಿತು ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕಿಚ್ಚ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಮುಂಬರುವ ಹುಟ್ಟುಹಬ್ಬದ ಆಚರಣೆ ಕುರಿತು ಅಭಿಮಾನಿಗಳನ್ನುದ್ದೇಶಿಸಿ ನಾಲ್ಕು ಪುಟಗಳ ಭಾವನಾತ್ಮಕ ಪತ್ರ ಬರೆದಿದ್ದಾರೆ.

ವೈಯಕ್ತಿಕ ಹಾಗೂ ಬಲವಾದ ಕಾರಣಗಳಿಂದಾಗಿ ಈ ವರ್ಷ ಸೆಪ್ಟೆಂಬರ್ 2ರಂದು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ಅಲ್ಲದೆ, ಸೆಪ್ಟೆಂಬರ್ 2ರಂದು ತಾವು ಮನೆಯಲ್ಲಿ ಲಭ್ಯವಿರುವುದಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.

ಅಭಿಮಾನಿಗಳ ಪ್ರೀತಿ ಹಾಗೂ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿರುವ ಸುದೀಪ್, ಈ ನಿರ್ಧಾರವನ್ನು ಅಭಿಮಾನಿಗಳು ಅರ್ಥಮಾಡಿಕೊಂಡು ಗೌರವಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕುರಿತು ಕುತೂಹಲ ಮೂಡಿಸುವ ಮಾತುಗಳನ್ನೂ ಸುದೀಪ್ ಪತ್ರದಲ್ಲಿ ಹಂಚಿಕೊಂಡಿದ್ದಾರೆ. “ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ” ಎಂಬ ಖಡಕ್ ಡೈಲಾಗ್ ಉಲ್ಲೇಖಿಸುವ ಮೂಲಕ ಮುಂದಿನ ಬಿಗ್ ಪ್ರಾಜೆಕ್ಟ್‌ಗಳಿಗೆ ಭರ್ಜರಿಯಾಗಿ ಸಜ್ಜಾಗುತ್ತಿರುವ ಸುಳಿವು ನೀಡಿದ್ದಾರೆ.

ಸುದೀಪ್ ಅವರ ಈ ಭಾವನಾತ್ಮಕ ಪತ್ರ ಇದೀಗ ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

Share with Friends
author avatar
Digital Desk