Latestರಾಜಕೀಯ | Politics

ಸಚಿವ ನಾಗೇಂದ್ರ ರಾಜೀನಾಮೆ ವಿಚಾರವಾಗಿ ಬಿಜೆಪಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ವಿಜಯಪುರ: ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ರಾಜೀನಾಮೆ ಕೇಳುವ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯವರು ಹೀಗೆ ನೋಡಿದರೆ ಬಹಳಷ್ಟು ಮಂದಿಗೆ ರಾಜೀನಾಮೆ ಕೊಡಿಸಬೇಕಾಗುತ್ತದೆ. ಅಸ್ಸಾಂ ಮುಖ್ಯಮಂತ್ರಿ ಹಾಗೂ ಬಿಹಾರ ಮುಖ್ಯಮಂತ್ರಿ ಅವರಿಗೂ ಬಿಜೆಪಿ ರಾಜೀನಾಮೆ ಕೊಡಿಸಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಬೇರೆ ಪಕ್ಷದಲ್ಲಿದ್ದಾಗ ಕೆಲವರನ್ನು ಭ್ರಷ್ಟರು ಎಂದು ಪ್ರಧಾನಿ ಮೋದಿ ಟೀಕಿಸುತ್ತಾರೆ. ಆದರೆ ಅವರು ಬಿಜೆಪಿ ಸೇರಿದ ತಕ್ಷಣ ಸಾಬೂನು ಹಚ್ಚಿ ಸ್ವಚ್ಛಗೊಳಿಸಿ, ಅವರನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.

ಸಚಿವ ನಾಗೇಂದ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿತ್ತು. ಇದಕ್ಕೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಅವರ ಮೇಲಿನ ಆರೋಪಗಳು ಇನ್ನೂ ಸಾಬೀತಾಗಿಲ್ಲ. ಅವರ ಹೆಸರು ಕೂಡ ಎಲ್ಲಿಯೂ ಆರೋಪಿಯಾಗಿ ಕೇಳಿಬಂದಿಲ್ಲ. ಆದರೂ ನೈತಿಕ ಹೊಣೆ ಹೊತ್ತು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದು, ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಪಾದಯಾತ್ರೆ ಮುಂದುವರಿಕೆ ವಿಚಾರ

ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಬಿಜೆಪಿ ಪಾದಯಾತ್ರೆ ಮುಂದುವರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, “ಒಳ್ಳೆಯದು, ಪಾದಯಾತ್ರೆ ಮಾಡಲಿ. ವೇಟ್ ಆದ್ರೂ ಕಡಿಮೆಯಾಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

Share with Friends
author avatar
Digital Desk