
ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ಮನವಿ..
ತುಮಕೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಬಸವರಾಜ್ ಕನ್ನಾಳೆ
ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ತಕ್ಷಣವೇ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು,
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಪ್ರವೇಶ ಪರೀಕ್ಷೆಯಲ್ಲಿ ಭಾರಿ ಅಕ್ರಮಗಳು ಬೆಳಕಿಗೆ ಬಂದಿದೆ.ಹಾಗು ಇದು ಕಳವಳಕಾರಿ ಸಂಗತಿ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಅಂದಿನ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರು ಈ ಅಕ್ರಮದಲ್ಲಿ ಭಾಗಿಯಾಗಿದ್ದರು.ಇಡಿ ಮತ್ತು ಸಿಐಡಿ ತನಿಖೆಯಿಂದ ಹೊರಬಂದಿದೆ ಎಂದು ಎಬಿವಿಪಿ ಆರೋಪಿಸಿದೆ.
ಸದ್ಯ ಸಿಐಡಿ ತನಿಖೆ ಎದುರಿಸುತ್ತಿರುವ ಬಸವರಾಜ್ ಕನ್ನಾಳೆ ಅವರನ್ನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು.ಅಲ್ಲದೆ, ಅವರ ಅಧಿಕಾರಾವಧಿಯಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದಿರಬಹುದಾದ ಅಕ್ರಮಗಳ ಕುರಿತಾಗಿಯೂ ಸಮಗ್ರ ತನಿಖೆ ನಡೆಸಬೇಕು.ಎಂದು ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.
ಈ ಕುರಿತು ತುಮಕೂರು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಕೂಡಲೇ ಸಿಂಡಿಕೇಟ್ ಸಭೆ ಕರೆದು, ಬಸವರಾಜ್ ಕನ್ನಾಳೆ ಅವರನ್ನು ಸದಸ್ಯತ್ವದಿಂದ ವಜಾಗೊಳಿಸಬೇಕು ,ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು ಹಾಗೂ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು,ಎಬಿವಿಪಿ ತುಮಕೂರು ವಿಭಾಗ ಸಂಚಾಲಕ ಗುರುಪ್ರಸಾದ್ ಎಚ್.ಆರ್. ಆಗ್ರಹಿಸಿದ್ದಾರೆ.
ಜೊತೆಗೆ, ಕೆಪಿಎಸ್‌ಸಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸುವುದರ ಮೂಲಕ ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ,ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರನ್ನು ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
