LatestTop Storiesಜಿಲ್ಲಾ ಸುದ್ದಿಗಳು | District Newsತುಮಕೂರು-Tumakuru

ರಾಹುಲ್ ಗಾಂಧಿಗೆ FIR..!ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ..!

ತುಮಕೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ರಾಜಕೀಯ ದ್ವೇಷಪೂರಿತವಾಗಿ ಸುಳ್ಳು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ನಂತರ ವೇದಿಕೆಯನ್ನು ‘ಶುದ್ಧೀಕರಣ’ಗೊಳಿಸಿದ ಘಟನೆಯನ್ನು ಖಂಡಿಸಿ, ಸಂವಿಧಾನ ಮತ್ತು ಅಸ್ಪೃಶ್ಯತೆ ವಿರುದ್ಧ ಧ್ವನಿ ಎತ್ತಿದ್ದ ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ರಾಹುಲ್ ಗಾಂಧಿಗೆ FIRಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಶುದ್ಧೀಕರಣದ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಅದನ್ನು ಪ್ರಶ್ನೆ ಮಾಡಿದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಮಾನವ ಸಮಾಜವೇ ತಲೆತಗ್ಗಿಸುವಂತಹದ್ದು. ತಕ್ಷಣವೇ ಈ ಸುಳ್ಳು ಎಫ್‌ಐಆರ್ ರದ್ದುಪಡಿಸಬೇಕು.

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಸದಾ ಹೋರಾಡಲಿದೆ.

ಈ ಕೂಡಲೇ ಎಫ್‌ಐಆರ್ ರದ್ದುಗೊಳಿಸದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾನಿರತ ನಾಯಕರು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಫೀಕ್ ಅಹಮದ್ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಗೌಡ ಕೆಎಸ್ಆರ್ಟಿಸಿ ಉಪಾಧ್ಯಕ್ಷರಾದ ನಿಖಿತ್ ಸುಜಾತಾ, ರಾಜ್ ಮೌರ್ಯ, ಕೆಂಚ ಮಾರಯ್ಯ ನ್ಯಾತೇಗೌಡ,ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಭಾಗಿಯಾಗಿದ್ದರು.

Share with Friends
author avatar
Digital Desk