LatestTop Storiesಜಿಲ್ಲಾ ಸುದ್ದಿಗಳು | District News

ವಿದ್ಯುತ್ ವ್ಯತ್ಯಯ ಖಂಡಿಸಿ ಬೆಸ್ಕಾಂಗೆ ರೈತರ ಮುತ್ತಿಗೆ!

ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯ ಖಂಡಿಸಿ ರೈತರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಿಗೇರಿ 110 ಕೆವಿ ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ ರೈತ ಸಂಘದ ಕಾರ್ಯಕರ್ತರು, ಸಮರ್ಪಕ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ರಾತ್ರಿ ವೇಳೆಯ ವಿದ್ಯುತ್ ಕಡಿತದಿಂದ ರೈತರು ಹಾಗೂ ಗ್ರಾಮೀಣ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆ ಪರಿಹರಿಸಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Share with Friends
author avatar
Digital Desk