LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluruರಾಜಕೀಯ | Politics

ಸಕ್ರಿಯ ರಾಜಕಾರಣಕ್ಕೆ ಸಿದ್ದು ಗ್ರೀನ್ ಸಿಗ್ನಲ್..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಅರಮನೆ ಮೈದಾನದದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ರಜತ ಮಹೋತ್ಸವ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಲಿಂಗಾಯತ, ಒಕ್ಕಲಿಗ ಆದಿಯಾಗಿ ನಾವೆಲ್ಲರೂ ಕೂಡ ಶೂದ್ರರೆ. ವರ್ಣ ವ್ಯವಸ್ಥೆಯಲ್ಲಿ ಮೇಲಿನ ಮೂರು ಜಾತಿಗಳಿಗೆ ಅವಕಾಶಗಳಿದ್ದವು. ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರೆ ಈ ಸಮಾಜದಲ್ಲಿ ಅಸಮಾನತೆ ನಿರ್ಮಾಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಶೂದ್ರ ವರ್ಗದ ಜನರು ಅಕ್ಷರ ಸಂಸ್ಕೃತಿಯಿಂದ, ಅವಕಾಶಗಳಿಂದ ವಂಚಿತರಾಗುತ್ತಿರಲಿಲ್ಲ ಎಂದು ಹೇಳಿದರು.

ಸಕ್ರಿಯ ರಾಜಕಾರಣಕ್ಕೆ ಸಿದ್ದು ಗ್ರೀನ್ ಸಿಗ್ನಲ್

ವಿದ್ಯಾರ್ಥಿ ದೆಸೆಯಿಂದಲೂ ಈ ಅಸಮಾನತೆಯ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ಮತ್ತು ನಾನು ಬಹಳ ಕಷ್ಟಪಟ್ಟು ಓದಿ, ಕಾನೂನು ಪದವಿಯನ್ನು ಪಡೆದುಕೊಂಡು, ನಂತರ ರಾಜಕಾರಣಿಯಾಗಿ ಹಿಂದುಳಿದ ಜಾತಿಗಳು, ಶೋಷಿತ ವರ್ಗಗಳು ಹೀಗೆ ಯಾರ್ಯಾರು ಅವಕಾಶಗಳಿಂದ ವಂಚಿತರಾಗಿದ್ದಾರೆ ಅವರೆಲ್ಲರ ಪರವಾಗಿ ಹೋರಾಟ ನಡೆಸಿದೆ.

ಯಾರೊಬ್ಬರೂ ದೌರ್ಜನ್ಯಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಅಸಮಾನತೆಯ ವಿರುದ್ಧ ಧ್ವನಿ ಎತ್ತುತ್ತಾ ಬಂದಿದ್ದೇನೆ. ಈಗಲೂ, ಮುಂದೆಯೂ ಕೂಡ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.ಸಾವಿರಾರು ವರ್ಷಗಳಿಂದ ಮನುಸ್ಮೃತಿ ಜಾರಿಯಲ್ಲಿತ್ತು. ಅದು ಅಲಿಖಿತ ಸಂವಿಧಾನ. ಅದರ ಪ್ರಕಾರವೇ ಜಾತಿಗಳನ್ನು ಒಡೆದು, ಶ್ರೇಣೀಕೃತ ವ್ಯವಸ್ಥೆಯನ್ನು ನಿರ್ಮಾಣ ಮಾಡಿ ಪಟ್ಟಭದ್ರರು ತಮ್ಮ ಬೆಳೆಕಾಳು ಬೇಯಿಸುವ ಕೆಲಸ ಮಾಡಿದ್ದಾರೆ.

ಅದಕ್ಕೆ ಅನುಗುಣವಾಗಿ ಇಂದು ಅಸಮಾನತೆ ನಿರ್ಮಾಣವಾಗಿದೆ.ಈ ದೇಶದಲ್ಲಿ ಒಂದು ದಿನ ಸಮ ಸಮಾಜ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದರು.ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಬಾರದು. ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ಎಲ್ಲಿಯವರೆಗೆ ಸಿಗುವುದಿಲ್ಲವೊ ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲೇಬೇಕು. ನಾನು ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಸಿದ್ದರಾಮಯ್ಯ ರವರು ತಿಳಿಸಿದ್ದರೆ.

Share with Friends
author avatar
Digital Desk