LatestTop Storiesಕೋಲಾರ-Kolaraಜಿಲ್ಲಾ ಸುದ್ದಿಗಳು | District News

ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ – ಶ್ರೀನಿವಾಸಪುರದಲ್ಲಿ ಬೃಹತ್ ಪ್ರತಿಭಟನೆ

ಕೋಲಾರ:ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಶ್ರೀನಿವಾಸಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಶ್ರೀನಿವಾಸಪುರದ ದೇವಲಪಲ್ಲಿ ಶಾಲೆಯ ಶಿಕ್ಷಕ ವಿಜಯ್ ಕುಮಾರ್ ಮೇಲೆ ಆರೋಪಕೇಳಿಬಂದಿದೆ. ದೇವಲಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯ್ ಕುಮಾರ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ ಎಂದು ದೂರು ದಾಖಲಾಗಿದೆ.

ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಶ್ರೀನಿವಾಸಪುರದಲ್ಲಿ ಬೃಹತ್ ಪ್ರತಿಭಟನೆ

ಶಿಕ್ಷಕ ವಿಜಯ್ ಕುಮಾರ್ ವಿರುದ್ಧ FIR ದಾಖಲು ಆಗಿದೆ.FIR ದಾಖಲಾಗಿ 4 ದಿನ ಆದ್ರೂ ಇನ್ನೂ ಅರೆಸ್ಟ್ ಆಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ರಕ್ಷಿಸುತ್ತಿದ್ದಾರೆ ಎಂದು ದೂರಿದ್ದಾರೆ.

“ಶಿಕ್ಷಕನಾಗಿ ಇಂತಹ ಹೇಯ ಕೆಲಸ ಮಾಡಬಾರದಿತ್ತು” ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹೋರಾಟಗಾರರು ಆಗ್ರಹ* ಮಾಡಿದ್ದಾರೆ.

ಆರೋಪಿ ವಿಜಯ್ ಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪೊಲೀಸರ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಬಂದ್ ಮಾಡಿ ಉಗ್ರ ಹೋರಾಟದ ಎಚ್ಚರಿಕೆನೀಡಿದ್ದಾರೆ.

Share with Friends
author avatar
Digital Desk