LatestTop Storiesಕೋಲಾರ-Kolaraಜಿಲ್ಲಾ ಸುದ್ದಿಗಳು | District News

ಮಾಲೂರು ತಾಲೂಕಾಧ್ಯಂತ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ –

ಕೋಲಾರ:ಮಾಲೂರು ತಾಲೂಕಾಧ್ಯಂತ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಲಾಗಿದೆ.45 ಸಾವಿರ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಲಾಗಿದ್ದು, ಉಚಿತ ಬ್ಯಾಗ್ ವಿತರಿಸಿದ ಹೂಡಿ ವಿಜಯ್ ಕುಮಾರ್ ಹಾಗೂ ಶ್ವೇತಾ ಹೂಡಿ ವಿಜಯ್.

ಮಾಲೂರು ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಅವರಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ – ಕಾಲೇಜು ಮಕ್ಕಳಿಗೆ ಬ್ಯಾಗ್ ವಿತರಿಸಿದ ಹೂಡಿ ವಿಜಯ್.

ಪ್ರತಿ ವರ್ಷದಂತೆ ಈ ವರ್ಷ ಕೂಡ ತಾಲೂಕಾಧ್ಯಂತ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ* ಮಾಡಲಾಗಿದೆ. ಸುಮಾರು 10 ವರ್ಷಗಳಿಂದ ಜನ ಸೇವೆ ಮಾಡುತ್ತಿರುವ ಹೂಡಿ ವಿಜಯ್.

ಮಾಲೂರು ತಾಲೂಕಾಧ್ಯಂತ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಈ ವೇಳೆ ಮಾತನಾಡಿದ ಹೂಡಿ ವಿಜಯ್, ಸರ್ಕಾರಿ ಶಾಲಾ ಕಾಲೇಜುಗಳನ್ನು ಸರ್ಕಾರ ಅಭಿವೃದ್ಧಿಪಡಿಸಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಅಭಿವೃದ್ಧಿಪಡಿಸಲು ಸರ್ಕಾರದಲ್ಲಿ ದುಡ್ಡಿಲ್ಲ.

CSR ಅನುದಾನದಲ್ಲಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು. ಪ್ರತಿವರ್ಷ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆಗಳಲ್ಲಿ ಮಾಡುತ್ತೇವೆ ಎಂದರು.ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳನ್ನು ಮುಚ್ಚದೇ ಅಭಿವೃದ್ಧಿಪಡಿಸುವ ಕೆಲಸ ಮಾಲೂರಲ್ಲಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಬಹುತೇಕ ಗಡಿಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ. ತಾಲೂಕಿಗೆ 3,200 ಕೋಟಿ ಅನುದಾನ ತಂದಿದ್ದೀನಿ ಅಂತ ಶಾಸಕರು ಹೇಳುತ್ತಾರೆ, ಅಭಿವೃದ್ಧಿ ಮಾತ್ರ ಶೂನ್ಯ ಎಂದು ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಹೂಡಿ ವಿಜಯ್ ಹೇಳಿಕೆ ನೀಡಿದ್ದಾರೆ.

Share with Friends
author avatar
Digital Desk