
ದೊಡ್ಡಬಳ್ಳಾಪುರದಲ್ಲಿ ‘ಸೇವಾ ಸೇತು ಅಭಿಯಾನ’ ಘೋಷಣೆ..
ಶಾಸಕ ಧೀರಜ್ ಮುನಿರಾಜ್ ಮಾಧ್ಯಮಗೋಷ್ಟಿ… ಪ್ರತಿ ವಾರ್ಡ್, ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಜನಪರ ಯೋಜನೆಗಳ ಮಾಹಿತಿ ಅಭಿಯಾನ.
ದೊಡ್ಡಬಳ್ಳಾಪುರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ‘ಸೇವಾ ಸೇತು ಅಭಿಯಾನ’ ಹಮ್ಮಿಕೊಳ್ಳಲಾಗಿದೆ.ಮುಂಬರುವ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 17ರವರೆಗೆ ನಿರಂತರವಾಗಿ ಈ ಅಭಿಯಾನ ನಡೆಯಲಿದೆ.
ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ನಗರದ ಪ್ರತಿಯೊಂದು ವಾರ್ಡ್ ಹಾಗೂ ಗ್ರಾಮಾಂತರ ಪ್ರದೇಶದ ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರನ್ನು ತಲುಪುವ ಕಾರ್ಯಕ್ರಮ ಶುರುವಾಗಲಿದೆ.
ಶಾಸಕರ ಕಚೇರಿಯ ಸಿಬ್ಬಂದಿ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.ಸರ್ಕಾರದ ವಿವಿಧ ಪ್ರಮಾಣಪತ್ರಗಳು ಮತ್ತು ಸೌಲಭ್ಯಗಳನ್ನು ಸೇವಾ ಸಿಂಧು ಹಾಗೂ ಗ್ರಾಮ ಒನ್/ಸಿಎಸ್‌ಸಿ ಕೇಂದ್ರಗಳ ಮೂಲಕ ಒದಗಿಸುವುದು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ಕೊಂಡೊಯ್ಯುವುದು ನಮ್ಮ ಉದ್ದೇಶ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ನೇರವಾಗಿ ತಲುಪಿಸಲು ‘ಸೇವಾ ಸೇತು ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಾಜ್ ಮುನಿರಾಜ್ ಪ್ರೆಸ್ ಮೀಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು.
ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ನಗರದ ಪ್ರತಿ ವಾರ್ಡ್ ಹಾಗೂ ಗ್ರಾಮಾಂತರ ಪ್ರದೇಶದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನ ಸಂಪರ್ಕ ಹಾಗೂ ವಸೂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
