
ಎಐ ಶಿಕ್ಷಣಕ್ಕೆ ಕ್ಯಾಮ್ಸ್ ವಿರೋಧ..!
ಬೆಂಗಳೂರು.ಸೆ.23- ಶಾಲಾ-ಕಾಲೇಜುಗಳಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿರುವುದಕ್ಕೆ ಖಾಸಗಿ ಶಾಲೆಗಳ ಒಕ್ಕೂಟಗಳ ಸಂಘಟನೆ ಕ್ಯಾಮ್ಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತವನ್ನು ಕಡೆಗಣಿಸಿ ಕಂಪ್ಯೂಟರ್ ಮತ್ತು ಆಧಾರಿತ ಶಿಕ್ಷಣವನ್ನು ಜಾರಿಗೆ ತರಲು ಮುಂದಾಗಿದೆ. ಇದು ಅವೈಜ್ಞಾನಿಕ ಕ್ರಮ ಎಂದು ಕ್ಯಾಮ್ಸ್ ಅಧ್ಯಕ್ಷ ಶಶಿಕುಮಾರ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಹಲವು ವರ್ಷಗಳಿಂದ ಬಹುಭಾಷಾ ಶಿಕ್ಷಣ ಪದ್ಧತಿ ಜಾರಿಯಲ್ಲಿದೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಬೆಳವಣಿಗೆಗೆ ಬಹುಭಾಷಾ ಶಿಕ್ಷಣ ವ್ಯವಸ್ಥೆ ಅಗತ್ಯವಾಗಿದೆ. ಮೂರನೇ ಭಾಷೆಯ ವಿಚಾರದಲ್ಲಿ ಒಂದೇ ಭಾಷೆಗೆ ಆದ್ಯತೆ ನೀಡುವ ಬದಲು ಹಲವು ಭಾಷೆಗಳನ್ನು ಒಳಗೊಂಡ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ನ್ಯಾಯಾಲಯದ ಅಭಿಪ್ರಾಯ ಸ್ವಾಗತಾರ್ಹ :
ಬಹುಭಾಷಾ ಶಿಕ್ಷಣ ವ್ಯವಸ್ಥೆಯನ್ನು ಬದಿಗೊತ್ತಿ ಕಂಪ್ಯೂಟರ್ ಅಥವಾ ಆಧಾರಿತ ಶಿಕ್ಷಣವನ್ನು ಜಾರಿಗೆ ತರಬಾರದು ಎಂಬ ನ್ಯಾಯಾಲಯದ ಅಭಿಪ್ರಾಯ ಸ್ವಾಗತಾರ್ಹವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ಬಹುಭಾಷಾ ಶಿಕ್ಷಣ ವ್ಯವಸ್ಥೆಯನ್ನು ಮುಂದುವರಿಸಬೇಕು. ಶಿಕ್ಷಣದ ಮೂಲ ಉದ್ದೇಶಕ್ಕೆ ಧಕ್ಕೆಯಾಗದ ರೀತಿಯಲ್ಲಿ ಯಾವುದೇ ಹೊಸ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಶಶಿಕುಮಾರ್ ಹೇಳಿದ್ದಾರೆ.
