LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ಉಪ್ಪಿನಕಾಯಿ ತಯಾರಿಕಾ ಘಟಕದ ಮೇಲೆ ದಾಳಿ..

ಬೆಂಗಳೂರು,ಸೆ.23– ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ಎಸ್.ಪಿ. ಮಲೆನಾಡು ಎಂಟರ್‌ಪ್ರೈಸಸ್ ಎಂಬ ಉಪ್ಪಿನಕಾಯಿ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಪ್ಲಾಸ್ಟಿಕ್ ಬ್ಯಾರೆಲ್‌ಗಳಲ್ಲಿ ದೀರ್ಘಕಾಲ ಸಂಗ್ರಹಿಸಿಟ್ಟಿದ್ದ ಉಪ್ಪಿನಕಾಯಿ ಪತ್ತೆಯಾಗಿದ್ದು, ಘಟಕದ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಘಟಕದಲ್ಲಿ ಆಹಾರ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಫ್ಯಾಕ್ಟರಿಗೆ ಬೀಗ ಹಾಕಿ ನೋಟಿಸ್ ನೀಡಲಾಗಿದೆ.

ಘಟಕದಲ್ಲಿದ್ದ ಉಪ್ಪಿನಕಾಯಿ ಮತ್ತು ಅದರ ತಯಾರಿಕಾ ಪ್ರಕ್ರಿಯೆಯ ಕುರಿತು ಹೆಚ್ಚಿನ ಪರಿಶೀಲನೆ ಹಾಗೂ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

Share with Friends
author avatar
Digital Desk