LatestTop Storiesಜಿಲ್ಲಾ ಸುದ್ದಿಗಳು | District News

ಆನೇಕಲ್‌ನಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿ ಹತ್ಯೆ..

ಆನೇಕಲ್.ಸೆ.23-ದೊಣ್ಣೆಯಿಂದ ಹೊಡೆದು ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ರಾಮಕೃಷ್ಣಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.

ರಸ್ತೆ ಬದಿಯ ಪೊದೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು,ಮೃತದೇಹದ ಪಕ್ಕದಲ್ಲೇ ದೊಣ್ಣೆಯೊಂದು ಪತ್ತೆಯಾಗಿದ್ದು,ರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತದೇಹದ ಮೇಲೆ ಇರುವೆಗಳು ತುಂಬಿಕೊಂಡಿದ್ದವು.ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮಾಹಿತಿ ತಿಳಿದು ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತನ ಗುರುತು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

ಘಟನಾ ಸ್ಥಳಕ್ಕೆ ಅಡಿಷನಲ್ ಎಸ್ಪಿ ಭೇಟಿ:

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂರ್ಯನಗರ ಪೊಲೀಸರಿಂದ ಘಟನೆಯ ಕುರಿತು ಮಾಹಿತಿ ಪಡೆದ ಅವರು, ಸ್ಥಳದಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಇನ್ನು, ಘಟನಾ ಸ್ಥಳದಲ್ಲಿ ಸೋಕೋ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಸುತ್ತಿದೆ. ಹತ್ಯೆಗೆ ಕಾರಣವೇನು ಹಾಗೂ ಆರೋಪಿಗಳು ಯಾರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share with Friends
author avatar
Digital Desk