LatestTop Storiesಕೊಪ್ಪಳ-Koppala

ಕೈಕೊಟ್ಟ ಹೆಡ್‌ಲೈಟ್ ; ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಸಂಚಾರ

ಕೊಪ್ಪಳ.ಸೆ.24- ಬಸ್‌ನ ಹೆಡ್‌ಲೈಟ್ ಕೈಕೊಟ್ಟ ಹಿನ್ನೆಲೆಯಲ್ಲಿ ಚಾಲಕ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಚಲಾಯಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದಿಂದ ಶಹಾಪುರಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಮಾರ್ಗಮಧ್ಯೆ ಕೆಟ್ಟುಹೋಗಿದೆ. ಬಳಿಕ ಚಾಲಕ ಪ್ರಯಾಣಿಕರು ಹಿಡಿದಿದ್ದ ಮೊಬೈಲ್‌ಗಳ ಟಾರ್ಚ್ ಬೆಳಕಿನ ಸಹಾಯದಿಂದ ಸುಮಾರು ೧೫ ಕಿಲೋಮೀಟರ್‌ವರೆಗೆ ಬಸ್ ಚಲಾಯಿಸಿದ್ದಾರೆ.

ಹೆಡ್‌ಲೈಟ್ ಇಲ್ಲದೆ ರಾತ್ರಿ ವೇಳೆ ಬಸ್ ಸಂಚಾರ ನಡೆಸಿರುವುದು ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕಕ್ಕೆ ಕಾರಣವಾಗಿದೆ.
ಗ್ರಾಮೀಣ ಭಾಗಗಳಿಗೆ ಹಳೆಯ ಬಸ್‌ಗಳನ್ನು ಕಳುಹಿಸಲಾಗುತ್ತಿದೆ ಎಂದು ಆರೋಪಿಸಿರುವ ಸ್ಥಳೀಯರು, ಈ ಬಗ್ಗೆ ಕೆಕೆಆರ್‌ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ದೋಷಪೂರಿತ ಬಸ್‌ಗಳನ್ನು ರಸ್ತೆಗೆ ಇಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share with Friends
author avatar
Digital Desk