LatestTop Storiesಮೈಸೂರು-Mysuru

ಮೈಸೂರು ಅರಮನೆಯ ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು.ಸೆ.25- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.

ಮೈಸೂರು ನಗರ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಸುಂದರರಾಜ್ ಹಾಗೂ ಹರ್ಷ ಪ್ರಿಯಂವದಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಜಂಬೂಸವಾರಿ ದಿನದಂದು ೨೧ ಬಾರಿ ಭಾರಿ ಫಿರಂಗಿ ಗಾಡಿಗಳ ಮೂಲಕ ಕುಶಾಲತೋಪು ಸಿಡಿಸಲು ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಶಾಲತೋಪು ಸಿಡಿಸುವ ತಾಲೀಮಿಗಾಗಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಜ್ಜಾಗಿದ್ದು, ಇಂದಿನಿಂದ ತರಬೇತಿ ಆರಂಭಿಸಲಿದ್ದಾರೆ.

ದಸರಾ ಜಂಬೂಸವಾರಿ ವೇಳೆ ನಡೆಯುವ ಕುಶಾಲತೋಪಿನ ಸಿಡಿತಕ್ಕೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ತರಬೇತಿ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.

Share with Friends
author avatar
Digital Desk