LatestTop StoriesWeatherಬೆಂಗಳೂರು-Bengaluru

ಕರಾವಳಿ, ಮಲೆನಾಡಿನಲ್ಲಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು.ಸೆ.26- ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಮಳೆ ಬೀಳುವ ನಿರೀಕ್ಷೆಯಿದೆ.

ನಾಳೆಯೂ ಮಳೆ ಮುಂದುವರಿಕೆ:

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ ಕೆಲವೆಡೆ ನಾಳೆಯೂ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಿಗೆ ಹೊಂದಿಕೊAಡಿರುವ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ದಿನಗಳಲ್ಲಿಯೂ ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share with Friends
author avatar
Digital Desk