LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ಗಾಂಧಿ ಜಯಂತಿ ಹಿನ್ನೆಲೆ ಕೆಎಸ್‌ಆರ್‌ಟಿಸಿಯಿಂದ ಭರ್ಜರಿ ಆಫರ್..

ಬೆಂಗಳೂರು.ಸೆ.26- ಗಾಂಧಿ ಜಯಂತಿ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ವಿವಿಧ ನಗರಗಳು ಹಾಗೂ ಹೊರ ಜಿಲ್ಲೆಗಳಿಗೆ 850 ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಅ.1 ಮತ್ತು ಅ.2ರಂದು ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಿಸಲಿವೆ. ಅ.2ರಂದು ಗಾಂಧಿ ಜಯಂತಿ ಹಾಗೂ ಅ.3 ಮತ್ತು ಅ.4ರಂದು ವಾರಾಂತ್ಯದ ರಜೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬೇರೆ ಕರೆ ಪ್ರಯಾಣ ಬೆಳಸುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಕಲ್ಪಿಸಿದೆ. ಪ್ರಯಾಣಿಕರು ಕೆಎಸ್‌ಆರ್‌ಟಿಸಿ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಬಹುದು.

Share with Friends
author avatar
Digital Desk