LatestTop Storiesಬೆಂಗಳೂರು-Bengaluru

ಬರ ಪರಿಹಾರಕ್ಕೆ ಕೇಂದ್ರಕ್ಕೆ ಸಮಗ್ರ ವರದಿ: ಪರಮೇಶ್ವರ್

ಬೆಂಗಳೂರು.ಸೆ.28 – ರಾಜ್ಯದಲ್ಲಿನ ಬರ ಪರಿಸ್ಥಿತಿಯ ಪರಿಶೀಲನೆಗೆ ಕೇಂದ್ರದಿಂದ ಮೂರು ತಂಡಗಳು ಆಗಮಿಸಲಿದ್ದು, ಮೂರೂ ತಂಡಗಳು ರಾಜ್ಯದ ವಿವಿಧೆಡೆ ಅಧ್ಯಯನ ನಡೆಸಿ ವರದಿ ಸಲ್ಲಿಸಲಿವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಅದರ ಆಧಾರದ ಮೇಲೆ ಕೇಂದ್ರದ ತಂಡಗಳು ಅಧ್ಯಯನ ನಡೆಸಲಿವೆ.ಇನ್ನಷ್ಟು ತಾಲ್ಲೂಕುಗಳನ್ನು ಪರಿಶೀಲಿಸುವಂತೆ ಮತ್ತೊಂದು ಮನವಿ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ತಾಲ್ಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಯುತ್ತಿದ್ದು,ಎಲ್ಲ ಮಾಹಿತಿ ಕ್ರೋಡೀಕರಿಸಿ ಅಕ್ಟೋಬರ್ ಮೊದಲ ವಾರದೊಳಗೆ ಸಮಗ್ರ ಬರ ವರದಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

ಸರ್ವಪಕ್ಷ ನಿಯೋಗಕ್ಕೆ ಬಿಜೆಪಿ ಬರಬೇಕು :

ಬರ ಪರಿಶೀಲನೆಗಾಗಿ ತೆರಳುವ ಸರ್ವಪಕ್ಷ ನಿಯೋಗದೊಂದಿಗೆ ಬಿಜೆಪಿ ಪ್ರತಿನಿಧಿಗಳೂ ಬರಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ರಾಜ್ಯದ ಬಿಜೆಪಿ ನಾಯಕರು ನಿಯೋಗದೊಂದಿಗೆ ಬಂದರೆ ಕೇಂದ್ರದ ಮುಂದೆ ರಾಜ್ಯದ ಬರ ಪರಿಸ್ಥಿತಿ ಹಾಗೂ ಪರಿಹಾರದ ಅಗತ್ಯವನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಲು ಸಾಧ್ಯವಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

ಬರ ಪಕ್ಷ ನೋಡಿ ಬರುವುದಿಲ್ಲ. ಅದು ಎಲ್ಲರಿಗೂ ಸಂಬಂಧಿಸಿದ ಸಮಸ್ಯೆ.ನಿಯೋಗದೊಂದಿಗೆ ಬಿಜೆಪಿ ನಾಯಕರು ಬಂದರೆ ಅನುಕೂಲವಾಗಲಿದೆ. ಅವರನ್ನು ಮತ್ತೊಮ್ಮೆ ಆಹ್ವಾನಿಸಲಾಗುವುದು. ಬಿಜೆಪಿ ನಾಯಕರು ನಿಯೋಗದೊಂದಿಗೆ ಬರದಿದ್ದರೆ ಏನು ಮಾಡಲು ಸಾಧ್ಯವಿಲ್ಲ. ರೈತರ ಬಗ್ಗೆ ಕಾಳಜಿ ಇದ್ದರೆ ಅವರು ಬರಬೇಕು ಎಂದು ಪರಮೇಶ್ವರ್ ಹೇಳಿದರು.

ಪರಿಹಾರ ಸಿಗದಿದ್ದರೆ ಮುಂದಿನ ಕ್ರಮ :

ಕೇಂದ್ರ ಸರ್ಕಾರದಿಂದ ಬರ ಪರಿಹಾರ ದೊರೆಯದಿದ್ದರೆ ಮುಂದಿನ ಕ್ರಮದ ಬಗ್ಗೆ ಚರ್ಚಿಸಲಾಗುವುದು. ಕಳೆದ ಬಾರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಮುಂದುವರಿಕೆ :

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಬೇಕಾಗಿರುವುದು ಸಹಜ.ಯೋಜನೆ ಆರಂಭಿಸುವಾಗಲೇ ಇದರಿಂದ ರಾಜ್ಯದ ಹಣಕಾಸಿನ ಮೇಲೆ ಒತ್ತಡ ಉಂಟಾಗಲಿದೆ ಎಂಬುದು ತಿಳಿದಿತ್ತು ಎಂದು ಪರಮೇಶ್ವರ್ ಹೇಳಿದರು.

ಆದರೂ ಕಳೆದ ಮೂರು ವರ್ಷಗಳಿಂದ ಹಣಕಾಸಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿಕೊಂಡು ಬರಲಾಗಿದೆ. ಮುಂದೆಯೂ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಹಣಕಾಸಿನ ಹೊರೆ ಇದ್ದರೂ ಅದನ್ನು ಸರ್ಕಾರ ನಿರ್ವಹಿಸಲಿದೆ ಎಂದರು.

ಗ್ಯಾರAಟಿ ಯೋಜನೆಗಳ ಕುರಿತು ಸ್ವಪಕ್ಷೀಯರು ನೀಡುತ್ತಿರುವ ಭಿನ್ನಾಭಿಪ್ರಾಯದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರವರ ವ್ಯಾಪ್ತಿಯಲ್ಲಿ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಹಣಕಾಸಿನ ಒತ್ತಡ :

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಹಣಕಾಸಿನ ಮೇಲೆ ಒತ್ತಡ ಹೆಚ್ಚಾಗಿರುವುದು ನಿಜ. ಇದನ್ನು ಮುಚ್ಚಿಡಲು ಸಾಧ್ಯವಿಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದಾಗ ಹೆಚ್ಚಿನ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಗ್ಯಾರಂಟಿ ಯೋಜನೆಗಳಿಗೆ ಸುಮಾರು 52 ಸಾವಿರ ಕೋಟಿ ವೆಚ್ಚ ಮಾಡುತ್ತಿರುವುದರಿಂದ ಸಹಜವಾಗಿಯೇ ಸರ್ಕಾರದ ಹಣಕಾಸಿನ ಮೇಲೆ ಒತ್ತಡ ಉಂಟಾಗುತ್ತದೆ ಎಂದು ಹೇಳಿದರು.

ಹಣಕಾಸಿನ ಹೊರೆ ಹೆಚ್ಚಾಗಿದೆ. ಅದನ್ನು ಮುಚ್ಚಿಡಲು ಸಾಧ್ಯವಿಲ್ಲ. ಆದರೆ ಕಳೆದ ಮೂರು ವರ್ಷಗಳಿಂದ ಅದನ್ನು ನಿರ್ವಹಿಸಿಕೊಂಡು ಬಂದಿದ್ದೇವೆ. ಈಗಲೂ ನಿರ್ವಹಿಸುತ್ತೇವೆ, ಮುಂದೆಯೂ ನಿರ್ವಹಿಸುತ್ತೇವೆ ಎಂದು ತಿಳಿಸಿದರು.

ಪ್ರಣಾಳಿಕೆ ಸಿದ್ಧಪಡಿಸುವಾಗಲೇ ಗ್ಯಾರಂಟಿ ಯೋಜನೆಗಳಿಗೆ ಆಗಬಹುದಾದ ವೆಚ್ಚದ ಬಗ್ಗೆ ಲೆಕ್ಕಾಚಾರ ಮಾಡಲಾಗಿತ್ತು. ಆರಂಭದಲ್ಲಿ ?40ರಿಂದ ?45 ಸಾವಿರ ಕೋಟಿ ವೆಚ್ಚವಾಗಬಹುದು ಎಂಬ ಅಂದಾಜು ಇತ್ತು. ಆದರೆ ಇದೀಗ ಅದು ಸುಮಾರು ?50 ಸಾವಿರ ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ವೆಚ್ಚದ ವಿಚಾರ ಎಲ್ಲರಿಗೂ ತಿಳಿದಿರುವುದೇ ಆಗಿದೆ. ಕೆಲವರು ತಮ್ಮದೇ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಯಾವುದೇ ಲೆಕ್ಕಾಚಾರವಿಲ್ಲದೆ ಪ್ರಣಾಳಿಕೆ ಸಿದ್ಧಪಡಿಸಿರಲಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

Share with Friends
author avatar
Digital Desk