LatestTop Storiesಬೆಂಗಳೂರು-Bengaluru

ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ

ಬೆಂಗಳೂರು.ಸೆ.30- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಸಿಟಿ ಸಿವಿಲ್ ಕೋರ್ಟ್ಗೆ ಹಾಜರುಪಡಿಸಿದರು. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯಲಿದೆ.

ಪ್ರಕರಣದ ವಿಚಾರಣೆಯ ವೇಳೆ ಕೋರ್ಟ್ ಕಲಾಪವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ನೀಡಲಾಗಿದ್ದ ಅವಕಾಶವನ್ನು ನ್ಯಾಯಾಲಯ ನಿರ್ಬಂಧಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪದ ವಿಡಿಯೋಗಳನ್ನು ರೆಕಾರ್ಡ್ ಮಾಡಿ, ಹೆಚ್ಚಿನ ವೀಕ್ಷಣೆಗಾಗಿ ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕೆಲವು ಯೂಟ್ಯೂಬರ್‌ಗಳು, ಇನ್‌ಫ್ಲುಯೆನ್ಸರ್‌ಗಳು ಹಾಗೂ ದರ್ಶನ್ ಅಭಿಮಾನಿಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಕೋರ್ಟ್ ಕಲಾಪದ ದೃಶ್ಯಗಳು ಹಾಗೂ ವಿಚಾರಣೆಗೆ ಸಂಬಂಧಿಸಿದ ಮಾಹಿತಿಗಳು ಪ್ರಸಾರವಾಗಿದ್ದವು. ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆಗೆ ಸಂಬಂಧಿಸಿದಂತೆಯೂ ವಿಡಿಯೋಗಳು ಪ್ರಸಾರವಾಗಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ನ್ಯಾಯಾಲಯ ಇನ್-ಕ್ಯಾಮರಾ ನಡೆಸುತ್ತಿದೆ. ವಿಚಾರಣೆಯ ಗೌಪ್ಯತೆ ಹಾಗೂ ಸಾಕ್ಷಿಯ ಹೇಳಿಕೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಕೋರ್ಟ್ ಈ ಕ್ರಮ ಕೈಗೊಂಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದು, ಪ್ರಕರಣದ ಪ್ರಮುಖ ಬೆಳವಣಿಗೆಯಾಗಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದೆ.

Share with Friends
author avatar
Digital Desk