LatestTop Storiesಬೆಂಗಳೂರು ಗ್ರಾಮಾಂತರ

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಬೆಂ.ಗ್ರಾಮಾಂತರ ಜಿಲ್ಲೆ.ಅ.1-ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಅರಸಮ್ಮ (45) ಎಂದು ಗುರುತಿಸಲಾಗಿದೆ.ಬೆಂಗಳೂರು ನಗರದಿಂದ ತಂದು ಕಸವನ್ನು ವಿಂಗಡಣೆ ಮಾಡುವ ಘಟಕದಲ್ಲಿ ಇಂದು ಬೆಳಗ್ಗೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು ಮೂಲದ ಅರಸಮ್ಮ ಕಳೆದ ಮೂರ್ನಾಲ್ಕು ವರ್ಷಗಳಿಂದ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.ಯಂತ್ರಕ್ಕೆ ಸಿಲುಕಿದ ಪರಿಣಾಮ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

Share with Friends
author avatar
Digital Desk