
ಮೈಸೂರಿನಲ್ಲಿ ಸರಣಿ ಅಪಘಾತ : ಇಬ್ಬರು ಸಾ*
ಮೈಸೂರು.ಅ.6-ಕಾರು, ಬೈಕ್ ಹಾಗೂ ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಟಿ. ನರಸೀಪುರ-ಮೈಸೂರು ಮುಖ್ಯ ರಸ್ತೆಯ ಇಂಡವಾಳು ಗ್ರಾಮದ ಬಳಿ ನಡೆದಿದೆ.
ಮೃತರನ್ನು ಟಿ. ನರಸೀಪುರ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಜಯಶಂಕರ್ (೨೯) ಹಾಗೂ ಸತ್ಯಗಾಲ ಗ್ರಾಮದ ಅಪ್ಪುಗೌಡ (೨೯) ಎಂದು ಗುರುತಿಸಲಾಗಿದೆ.
ಇಬ್ಬರು ಬೈಕ್ ಸವಾರರು ಬೈಕ್‌ನಲ್ಲಿ ಮೈಸೂರಿನತ್ತ ತೆರಳುತ್ತಿದ್ದ ವೇಳೆ, ಹಿಂದಿನಿAದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರರಾದ ಜಯಶಂಕರ್ ಹಾಗೂ ಅಪ್ಪುಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನ ಡಿಕ್ಕಿಯಿಂದ ಆಟೋದಲ್ಲಿದ್ದ ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಟಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
