
ರಸ್ತೆಯಲ್ಲಿ ಬೈಕ್ ವ್ಹೀಲಿಂಗ್: ಯುವಕನ ವಿರುದ್ಧ ಪ್ರಕರಣ
ಕೊಪ್ಪಳ.ಅ.6- ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕನ ವಿರುದ್ಧ ಗಂಗಾವತಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಪ್ಪಿಮಾಳಿ ಕ್ಯಾಂಪ್‌ನ ಯಮನೂರ (೧೯) ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು,ಈತ ಸೆಪ್ಟೆಂಬರ್ ೧೮ರಂದು ಪ್ರಶಾಂತ ನಗರದ ಮಸೀದಿ ಎದುರು ಸಾರ್ವಜನಿಕ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡಿದ್ದಾನೆ .
ಯುವಕ ಯಮನೂರ ಬೈಕ್ ವ್ಹೀಲಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವಿಡಿಯೋವನ್ನು ಪೊಲೀಸ್ ಸಾಮಾಜಿಕ ಜಾಲತಾಣ ನಿಗಾ ಘಟಕದ ಸಿಬ್ಬಂದಿ ಗಮನಿಸಿದ್ದು, ಬಳಿಕ ಗಂಗಾವತಿ ಸಂಚಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೋವನ್ನು ಆಧಾರವಾಗಿಸಿಕೊಂಡು ಗಂಗಾವತಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
