LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ

ಬೆಂಗಳೂರು.ಅ.7- ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮುಂದುವರಿಸಿರುವ ಸಿಐಡಿ ಅಧಿಕಾರಿಗಳು, ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳನ್ನೇ ಸಾಕ್ಷಿಗಳಾಗಿ ಪರಿಗಣಿಸಲು ಮುಂದಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಲು ಸಿಐಡಿ ನಿರ್ಧರಿಸಿದೆ. ಈ ಸಂಬAಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಅಭ್ಯರ್ಥಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ದಾಖಲಿಸಲು ಸಿದ್ಧತೆ ನಡೆಸಿದೆ.

ಈಗಾಗಲೇ ಹಲವು ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೂವರು ಅಭ್ಯರ್ಥಿಗಳು ಹಣ ನೀಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ತನಿಖೆಯ ಸಂದರ್ಭದಲ್ಲಿ ಎಂಟಕ್ಕೂ ಹೆಚ್ಚು ಅಭ್ಯರ್ಥಿಗಳು ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಸಿಐಡಿ ಅಧಿಕಾರಿಗಳ ಮುಂದೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಅಭ್ಯರ್ಥಿಗಳಿಂದ 164ರ ಅಡಿ ಹೇಳಿಕೆ ದಾಖಲಿಸಲು ಸಿಐಡಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಪ್ರಕರಣದ ತನಿಖೆಗೆ ಈ ಹೇಳಿಕೆಗಳು ಮಹತ್ವದ ಸಾಕ್ಷ್ಯವಾಗುವ ನಿರೀಕ್ಷೆ ಇದೆ.

Share with Friends
author avatar
Digital Desk