LatestTop Storiesಜಿಲ್ಲಾ ಸುದ್ದಿಗಳು | District Newsಬಳ್ಳಾರಿ-Ballary

ಕಾಲುವೆಗೆ ಹಾರಿ ತಾಯಿ, ಇಬ್ಬರು ಮಕ್ಕಳ ಸಾ*..!

ಬಳ್ಳಾರಿ.ಅ.14- ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಕೆಳಹಂತದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಳ್ಳಾರಿಯ ಮಿಲ್ಲರ್‌ಪೇಟೆ ನಿವಾಸಿ ನಿವಾಸಿ ಲತೀಫಾ ಸಿಮ್ರಾನ್ (29) ಹಾಗೂ ಅವರ ಮಕ್ಕಳಾದ ಮಹಮ್ಮದ್ ಅಯಾನ್ (3), ಆಯಿಷಾ ಫಾತಿಮಾ (2) ಜೊತೆಗೆ ಕಾಲುವೆಗೆ ಹಾರಿ ಮೃತಪಟ್ಟವರು. ಮಹಿಳೆಯ ಶವ ಪತ್ತೆಯಾಗಿದ್ದು, ಮಕ್ಕಳಿಬ್ಬರಿಗಾಗಿ ಶೋಧ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯ ಪತಿ ಸದ್ದಾಂ ಹುಸೇನ್ ನೀಡುತ್ತಿದ್ದ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಆಯಿಷಾ ಪರ್ವೀನ್ ದೂರಿನಲ್ಲಿ ಆರೋಪಿಸಿದ್ದಾರೆ. ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು, ಆಕೆಗೆ ಮನೆ ನಿರ್ಮಿಸಲು 10 ಲಕ್ಷ ರೂ. ನೀಡಬೇಕೆಂದು ಪತ್ನಿಗೆ ಒತ್ತಡ ಹೇರುತ್ತಿದ್ದ. ಅಲ್ಲದೆ, ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದ ಹಾಗೂ ಮದುವೆ ಸಂದರ್ಭದಲ್ಲಿ ನೀಡಲಾಗಿದ್ದ 15 ತೊಲೆ ಚಿನ್ನಾಭರಣವನ್ನು ಮಾರಾಟ ಮಾಡಿದ್ದ ಎಂಬ ದೂರಿನಲ್ಲಿ ಆರೋಪಿಸಲಾಗಿದೆ.

ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಘಟನೆಯ ಹಿನ್ನೆಲೆಯಲ್ಲಿ ಮೃತ ಮಹಿಳೆಯ ತಾಯಿ ಆಯಿಷಾ ಪರ್ವೀನ್ ನೀಡಿರುವ ದೂರಿನ ಆಧಾರದ ಮೇಲೆ ಬಳ್ಳಾರಿ ಮಹಿಳಾ ಠಾಣೆಯಲ್ಲಿ ಅಳಿಯ ಸದ್ದಾಂ ಹುಸೇನ್ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share with Friends
author avatar
Digital Desk