
ಲಾರಿಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಹಿಂಬದಿ ಸವಾರ ಸಾ*
ಹೊಸಕೋಟೆ.ಅ.15- ಓವರ್‌ಟೇಕ್ ಮಾಡುವ ವೇಳೆ ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸಾವು ಕಂಡ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ಲಂಬರ್ ಕೆಲಸಗಾರ ಬಿಹಾರದ ಕಮಲಾಕಾಂತ್ (36) ಮೃತಪಟ್ಟ ಹಿಂಬದಿ ಸವಾರನಾಗಿದ್ದಾನೆ
ಕಮಲಾಕಾಂತ್ ಮತ್ತೊಬ್ಬ ವ್ಯಕ್ತಿಯೊಂದಿಗೆ ಬೈಕ್‌ನಲ್ಲಿ ಮಾಲೂರಿನಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿಯನ್ನು ಓವರ್‌ಟೇಕ್ ಮಾಡಲು ಮುಂದಾದಾಗ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಕಮಲಾಕಾಂತ್ ತಲೆಯ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
