Latestಬೆಂಗಳೂರು-Bengaluruರಾಜ್ಯ-Karnataka

ಯುಗಾದಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್!

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಎ ಸಂಸ್ಥೆ ವಿವಿಧ ಊರುಗಳಿಗೆ 200ಕ್ಕು ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ, ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಉರಿಗೆ ತೆರಳವವರಿಗೆ ಹಾಗೂ ಪ್ರವಾಸ ತೆರಳವವರಿಗೆ ಗುಡ್‌ನ್ಯೂಸ್ ನೀಡಿದೆ.

ಏಪ್ರಿಲ್ 9 ರಂದು ಯುಗಾದಿ ಹಬ್ಬ ಇರಲಿದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಸೋಮವಾರ ಒಂದು ದಿನ ರಜೆ ಮಾಡಿದರೆ 4 ದಿನ ರಜೆ ಸಿಕ್ಕಂತಾಗುತ್ತದೆ. ಮುಂದಿನ ವಾರ, ಏಪ್ರಿಲ್ 11 ಬರ ಗುರುವಾರ ಮುಸ್ಲಿಮರ ಹಬ್ಬ ರಂಜಾನ್ ಸಹ ಇರಲಿದೆ. ಇದನ್ನೂ ಓದಿ:ಆರ್ಮಿ ಆಫೀಸ್ ಎಂದು ನಂಬಿಸಿ , ಹಣ ಕೇಳಿದ್ರೆ ಫೇಕ್ ಪೇಮೆಂಟ್

https://youtu.be/qr5SSnfxj7I?si=U_wyldi3WVdbujZA

13 ರಂದು ಎರಡನೆ ಶನಿವಾರ ರಜೆ ಹಾಗೂ 14 ರಂದು ಭಾನುವಾ ರಜೆ ಇದೆ. ಈ ಎಲ್ಲ ಕಾರಣಗಳನ್ನು ಪ್ರಯಾಣಿಕರ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ:  ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್

https://youtu.be/ODS2Izo8Lsk?si=bVw6xC_YJchV5BkW

ಕೆಎಸ್‌ಆರ್‌ಟಿಸಿಯಿಂದ 1,750ಬಸ್, ವಾಯವ್ಯ ರ‍್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ:  ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್

ಎಲ್ಲಿಗೆಲ್ಲ ವಿಶೇಷ ಬಸ್​?
ನಗರದ ಕೆಂಪೇಗೌಡ ನಿಲ್ದಾಣ, ಸ್ಯಾಟಲೈಟ್ ನಿಲ್ದಾಣ, ಶಾಂತಿನಗರದಿಂದ ವಿಶೇಷ ಬಸ್ ಸೇವೆ ದೊರೆಯಲಿದೆ. ರ‍್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋರ‍್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿ‌ ಹಲವು ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ. ನೆರೆರಾಜ್ಯಗಳ ನಗರಗಳಾದ ಹೈದರಾಬಾದ್, ಚೆನ್ನೈ,‌ ಗೋವಾ ಪಣಜಿ, ಶಿರಡಿ, ರ‍್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ. ಇದನ್ನೂ ಓದಿ:  ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

https://youtu.be/0Nyx7Oqxwo4?si=dAlc77l9hZ6P6P4W
Share with Friends
author avatar
News Desk