Latestರಾಷ್ಟ್ರೀಯ-National

ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

https://youtu.be/9r25Hq2PyVI?si=fAfdrVxsttlP6gQa

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಕೊಠಡಿಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ

https://youtu.be/mIsJ9y60B1g?si=KuZ7IesBQQD7YuVt

ಇದಕ್ಕೂ ಮುನ್ನ ಕವಿತಾ ಅವರನ್ನು ಸೋಮವಾರ (ಏಪ್ರಿಲ್ 8) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನೂ ಓದಿ:ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತೆರಳಿದ ಬಾಲಕರು ನೀರು ಪಾಲು

https://youtu.be/ZiV5Fj8-CH4?si=g_h8-h00guZtCHwC

Share with Friends
author avatar
News Desk