ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ
ಭೋಪಾಲ್: ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯ ಸ್ತಂಭನದಿoದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
ಪಕ್ಷದ ಪ್ರಕಾರ, ಭಾಲವಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಅಷ್ಟರಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ವಿಚಾರವನ್ನು ಬೆತುಲ್ ಡಿಎಂ ನರೇಂದ್ರ ಕುಮಾರ್ ಸೂರ್ಯವಂಶಿ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಏಪ್ರಿಲ್ 26ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಹಬ್ಬದ ದಿನವೇ ಸಿಹಿಸುದ್ದಿ- ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ್
ಇತ್ತ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನರೇಂದ್ರ ಸಿಂಗ್ ರಘುವಂಶಿ ಪ್ರತಿಕ್ರಿಯಿಸಿ, ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್!
ಬೇತುಲ್ನ ಹಾಲಿ ಸಂಸದ ದುರ್ಗಾ ದಾಸ್ ಉಯಿಕೆ ಅವರನ್ನು ಬಿಜೆಪಿ ಮತ್ತೊಮ್ಮೆ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಕಾಂಗ್ರೆಸ್ ರಾಮು ಟೇಕಂ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 26 ರಂದು ಟಿಕಮ್ಗಢ್, ದಾಮೋಹ್, ಖಜುರಾಹೊ, ಸತ್ನಾ, ರೇವಾ ಮತ್ತು ಹೊಶಂಗಾಬಾದ್ ಸ್ಥಾನಗಳೊಂದಿಗೆ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೇತುಲ್ ಮತದಾನ ಮಾಡಲು ನಿರ್ಧರಿಸಲಾಗಿತ್ತು. ಇದನ್ನೂ ಓದಿ: ಪಾರ್ಕಿಂಗ್ ವಿಚಾರಕ್ಕೆ ಪಕ್ಕದ ಮನೆಯವರೊಂದಿಗೆ ಕಿರಿಕ್ ಮಾಡಿಕೊಂಡ ನಟಿ ಶರಣ್ಯ
