Latestಚುನಾವಣೆ-Electionರಾಜ್ಯ-Karnatakaಶಿವಮೊಗ್ಗ-Shivamogga

ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ ಮಾಡದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಶಿವಮೊಗ್ಗದಲ್ಲಿ ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಅವರು ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದ್ದರು. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯೇ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು. ಇದನ್ನೂ ಓದಿ: ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್

https://youtu.be/_Nk-Jm289Is?si=yVZvnRccsR4ue0rE

ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಅವರು ಮೋದಿ ಫೋಟೋ ಬಳಸಿದ್ದಕ್ಕೆ ದೂರು ನೀಡಿದ ಬಳಿಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಫೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ.

ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಅವರು ಮೋದಿ ಫೋಟೋ ಬಳಸಿದ್ದಕ್ಕೆ ದೂರು ನೀಡಿದ ಬಳಿಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಫೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಪಕ್ಷದ ಹೆಸರು ಭಾವಚಿತ್ರ ಬಳಸುವ ಅಧಿಕಾರ ಅವರಿಗೆ ಇರುವುದಿಲ್ಲ. ಈಶ್ವರಪ್ಪ ಹೀಗೆ ಮುಂದುವರೆದರೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬೆಕ್ಕು ರಕ್ಷಿಸಲು ಬಾವಿಗೆ ಬಿದ್ದ ಒಂದೇ ಮನೆಯ ಐವರು ಸಾವು

.

Share with Friends
author avatar
News Desk