ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದು 5 ಮಂದಿ ಸಾವು
ಪುರಿ: ಒಡಿಶಾದ ಜಜ್ಪುರ ಜೆಲ್ಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಕೆಳಗೆ ಬಿದ್ದ ಪರಿಣಾಮ ಐವರು ಸಾವನ್ನಪಪಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ ಪುರಿಯಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಭಯೋತ್ಪಾದಕನಂತೆ ಕೇಜ್ರಿವಾಲ್ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ
ಸದ್ಯ ಜಜ್ಪುರದ ಪೊಲೀಸ್ ಅಧೀಕ್ಷಕರು, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತ ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟರ್ ಬಳಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ:ಒಕ್ಕಲಿಗ, ಲಿಂಗಾಯತ ವೋಟ್ಬ್ಯಂಕ್ ಕಬ್ಜಕ್ಕೆ ಅಖಾಡಕ್ಕೆ ಧುಮುಕಿದ ಹೆಚ್ಡಿಕೆ
ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ನವೀಣ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ. ಪ್ರೀತಪಪಾತ್ರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 3 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ:ತಮ್ಮ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್
