Crime NewsLatestಧಾರವಾಡ-Dharwadರಾಜ್ಯ-Karnataka

ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ

ಹುಬ್ಬಳ್ಳಿ: ಹುಬ್ಬಳ್ಳಿ (Hubbali) ಎಂಸಿಎ ವಿದ್ಯಾರ್ಥಿನಿ ಕೊಲೆ ವಿಚಾರವಾಗಿ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ನೇಹಾ ಅವರ ತಂದೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರಾಗಿರುವ ನಿರಂಜನ್ ಹಿರೇಮಠ ಅವರು ಮಗಳ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೋರೇಟರ್, ನನಗೆ ಹೀಗಾದರೆ ಬೇರೆಉಯವರ ಕಥೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್

https://youtu.be/n6TR5sFjO68?si=rb4zkd5up8oN8y8k

ಸಿಎಂ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವ್ಯಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲಿ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಹೇಳಿದ್ದಾರೆ. ಇದನ್ನೂ ಓದಿ: ಪ್ರಚಾರದ ವೇಳೆ ಹಿಟ್‌ & ರನ್ – ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತ ಸಾವು

Share with Friends
author avatar
News Desk