ಲೋಕಸಭಾ ಚುನಾವಣಾ ಅಖಾಡದಿಂದ ದಿಂಗಾಲೇಶ್ವರ ಶ್ರೀ ಹಿಂದಕ್ಕೆ
ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ (Lokasabha) ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು (Sri Dingaleshwara Swamiji) ನಾಮಪತ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜೆ ತಮ್ಮ ಸೂಚಕರಾದ ಸಚ್ಚಿನ್ ಪಾಟೀಲ್ ಮತ್ತು ಅಮರತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವನಾ ಆಯೊಗದಿಂದ ತೆರೆಸಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಮದುವೆ ದಿನವೇ ಯುವಕನ ಸಾವು : ತಲೆ ತುಂಡರಿಸಿದ್ದ ಶವ ಪತ್ತೆ

ಹಿಂದೆ ಸರಿಯುವಂತೆ ಮನವಿ ಮಾಡಿದ ಸಿಎಂ, ಡಿಸಿಎಂ
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರಿಗೆ ಬೆಂಬಲಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ದಿಂಗಾಲೇಶ್ವರ ಶ್ರೀಗೆ ಕರೆ ಮಾಡಿ ಮಾತನಾಡಿದ್ದು, ನಿಮ್ಮ ನಿರ್ಧಾರ ನಮಗೆ ಮೊದಲೇ ಗೊತ್ತಿದ್ದರೆ ನಮ್ಮ ಪಕ್ಷದಿಂದಲೇ ಅವಕಾಶ ಮಾಡಲು ಸುಲಭವಾಗುತ್ತಿತ್ತು. ಇದೀಗ ಪಕ್ಷ ದಿಂದ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದೇವೆ. ಕಾಂಗ್ರೆಸ್ ಹಾಗೂ ನಿಮ್ಮ ನಡುವೆ ಮತ ವಿಭಜನೆಯಾದರೆ ಜೋಶಿ ಗೆಲುವು ಸುಲಭವಾಗಲಿದೆ. ಹೀಗಾಗಿ ನಾವು ಇಬ್ಬರೂ ಸೇರಿ ಅವರ ವಿರುದ್ದ ಹೋರಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಖಂಡಿಸಿ ರಾಜ್ಯದ್ಯಂತ ಬಿಜೆಪಿ ಪ್ರತಿಭಟನೆ
ಡಿಕೆ ಶಿವಕುಮಾರ್ ಮಾತ್ರವಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕರೆ ಮಾಡಿ ನಾಮಪತ್ರ ವಾಪಸ್? ಪಡೆಯುವಂತೆ ಮನವಿ ಮಾಡಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ವಾಪಸ್? ಪಡೆಯುವ ಮೂಲಕ ಕಾಂಗ್ರೆಸ್ ತಂತ್ರ ಸಫಲಾವಾಗಿದ್ದು, ಚದುರುತ್ತಿದ್ದ ಮತಗಳು ಒಂದಡೆಯಾಗಲಿವೆ ಎಂಬುವುದು ಕಾಂಗ್ರೆಸ್ನ ಚಿಂತನೆಯಾಗಿದೆ. ಇದನ್ನೂ ಓದಿ: ನೇಹಾ ಕೋಲೆ ಕೇಸ್ ಸಿಐಡಿ ತನಿಖೆಗೆ ವಹಿಸುತೇವೆ: ಸಿಎಂ
