Crime NewsLatestರಾಷ್ಟ್ರೀಯ-National

ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ

ಅಮರಾವತಿ: ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಧುವಿನ ಕುಟುಂಬದವರೇ ಆಕೆಯನ್ನು ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲು ಪ್ರಯತ್ನಿಸಿದ ಘಟನೆ ನಡೆದಿದೆ.

ಈ ಘಟನೆ ಕಡಿಯಂ ಪ್ರದೇಶದಲ್ಲಿ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಮಂಟಪಕ್ಕೆ ಏಕಾಏಕಿ ನುಗ್ಗಿದ ವಧುವಿನ ಕುಟುಂಬ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದೆ. ಅಲ್ಲದೇ ಅಪಹರಣ ತಡೆಯಲು ಬಂದವರ ಮೇಲೆ ಮೆಣಸಿನ ಪುಡಿಯನ್ನು ಎರಚಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರದ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ

https://youtu.be/8LPX6mzVP_s?si=dXSC6vdDa5B-4lU4

ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯಲು ಯತ್ನಿದ್ದಾರೆ. ಆದರೆ ಸ್ನೇಹಾ ಹರಸಾಹಪಟ್ಟು ಅವರ ಕೈಯಿಂದ ತಪ್ಪಿಸಿಕೊಂಡಿದ್ದಾಳೆ. ಇದರ ವೀಡಿಯೋ ಮಂಟಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬಿಜೆಪಿಗೆ ಮೊದಲ ಜಯ: ಮತದಾನಕ್ಕೂ ಮೊದಲು ಗೆದಿದ್ದು, ಹೇಗೆ?

ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಈ ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಮನೆಯ ಮಗನೇ ಕೊಲೆಯ ಹಿಂದಿನ ಮಾಸ್ಟರ್‌ಮೈಂಡ್

https://youtu.be/CVHlLryW8k8?si=NY2H17OgRviqLcK3
Share with Friends
author avatar
News Desk