Latestರಾಜಕೀಯ | Politicsರಾಷ್ಟ್ರೀಯ-National

ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನೆಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind kejriwal) ಹಾಗೂ ಬಿಆರ್‌ಎಸ್ ನಾಯಕಿ ಕೆ ಕವಿತಾ (Kavitha) ನಅವರ ನ್ಯಾಯಂಗ ಬಂಧನವನ್ನು ದೆಹಲಿ ನ್ಯಾಯಾಲಯ (Delhi Court) ಮೇ 7 ರವರೆಗೆ ವಿಸ್ತರಿಸಿದೆ.

ಈ ಹಿಂದೆ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ನಂತರ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧವನ್ನು ಏಪ್ರಿಲ್ 23 ರವರೆಗೆ ವಿಸತರಿಸಿತ್ತು. ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು

https://youtu.be/CVHlLryW8k8?si=Md7mP37g-uKtMRft

ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್‌ ಎಸ್‌ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ. ಇದನ್ನೂ ಓದಿ: ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ಸಜ್ಜಾದ ವಿಶಾಲ್

https://youtu.be/8LPX6mzVP_s?si=hn_3YN-bYTVkimvm

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ನೇಹಾ ಹಿರೇಮಠ ತಂದೆ ಬಳಿ Very Sorry ಎಂದ ಸಿಎಂ

Share with Friends
author avatar
News Desk