Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ.

ಎಸ್. ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿರುವುದರಿಂದ ವಯೋಸಹಜ ಕಾರಣಗಳಿಂದ ಅವರು ಪದೇ ಪದೇ ಅನರ‍್ಯೋಗ್ಯಕ್ಕಿಡಾಗುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

https://youtu.be/tEV71sOEnV8?si=7qxwhkRIhmS2ceYd

ಅವರನ್ನು ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆದರೆ ಅವರು ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ

https://youtu.be/hUI_GuBNXgY?si=XW17TSWeRw9P0x34

ಏಪ್ರಿಲ್ 21ರಂದು ಎಸ್‌.ಎಂ ಕೃಷ್ಣರಿಗೆ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಅವರು ಡಿಸ್ಟರ‍್ಜ್ ಸಹ ಆಗಿದ್ದರು. ಆದರೆ ಇಂದು ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೇಲೆ ಅನುಮಾನ

Share with Friends
author avatar
News Desk