Crime NewsLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnatakaಹಾಸನ-Hassan

ಪೆನ್‌ಡ್ರೈವ್‌ ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ಯಾರು?

ಬೆಂಗಳೂರು/ ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಆಶ್ಲೀಲ ವಿಡಿಯೋವನ್ನ ಯಾರು ಬಿಡುಗಡೆ ಮಾಡಿದ್ದು ಎಂಬ ಕೂತೂಹಲವಿದ್ದು, ಇದೀಗ ಯಾರು ರಿಲೀಸ್ ಮಾಡಿದವರು ಎಂಬ ಮಾಹಿತಿ SIT ಗೆ ಲಭ್ಯವಾಗಿದೆ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಪ್ರಕರಣ ದಾಖಲಾದ ಮೇಲೆ ತನಿಖೆ ಚುರುಕುಗೊಳಿಸಿದೆ. ತನಿಖೆ ನಡೆಯುತ್ತಿರುವಾಗಲೇ ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋವನ್ನು ಮೊದಲು ಬಿಡುಗಡೆ ಮಾಡಿರುವುದು ಯಾರು ಎನ್ನುವುದೇ ನಿಗೂಢವಾಗಿತ್ತು. ಈ ಸಂಬಂಧ ಕುಮಾರಸ್ವಾಮಿ ಡಿಕೆ ಶಿವಕುಮಾರ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಮಧ್ಯೆ ಇದೀಗ ವಿಡಿಯೋ ರಿಲೀಸ್ ಮಾಡಿದ್ದವರು ಯಾರು ಎನ್ನುವ ಸ್ಫೋಟಕ ಮಾಹಿತಿ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಅವರ ಬಳಿಕ ಕಾರು ಚಾಲಕನಾಗಿದ್ದ ಕಾರ್ತಿಕ್ (Karthik) , ಮೊದಲು ವಿಡಿಯೋವನ್ನು ವಾಟ್ಸಪ್ ಮೂಲಕ ಬೇರೊಬ್ಬರಿಗೆ ಕಳುಹಿಸಿದ್ದಾರೆ. ಆತ ಬೇರೆ ಯಾರೂ ಅಲ್ಲ ಕಾಂಗ್ರೆಸ್ ಕಾರ್ಯಕರ್ತ, ಸಚಿವ ಜಮೀರ್ ಅಹಮ್ಮದ್ ಖಾನ್ ಬೆಂಬಲಿಗ ಬೇಲೂರು ಮೂಲದ ನವೀನ್ ಗೌಡ ಅವರಿಗೆ ವಿಡಿಯೋ ಕಳುಹಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ. ಇದನ್ನೂ ಓದಿ: 400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

https://youtu.be/Be99yrIDWss?si=48mZ5b0PYX3Sq9o7

ವಿಡಿಯೋ ಬಗ್ಗೆ ಪೋಸ್ಟ್ ಹಾಕಿದ್ದ ನವೀನ್ ಗೌಡ
ವಿಡಿಯೋ ಸಿಕ್ಕ ಬಳಿಕ ನವೀನ್ ಗೌಡ, ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್‌ಬುಕ್‌ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆ ಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ. ಇದೀಗ ನವೀನ್ ಗೌಡ ಎಂಬಾತನಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಜರ್ಮನಿಯಿಂದ ದುಬೈಗೆ ಬಂದಿಳಿದ ಪೆನ್‌ಡ್ರೈ ವ್‌ ಪ್ರಜ್ವಲ್ ರೇವಣ್ಣ

Share with Friends
author avatar
News Desk