Latestಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು!

ಮೈಸೂರು: ಮಗನ (Son) ಪೆನ್‌ಡ್ರೈವ್‌ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ (Father) ಸಂಕಷ್ಟ ಎದುರಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revamnna) ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ರೇವಣ್ಣ ವಿರುದ್ಧ FIR ದಾಖಲಾಗಿದೆ. ಇದನ್ನೂ ಓದಿ: ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ಅನಾರೋಗ್ಯದಿಂದ ನಿಧಾನ

https://youtu.be/L_NVdLRw1yE?si=2lWNIHTWl5hWsMmv

ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ . ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಾಹನ ಸವಾರರೇ ಇಲ್ಲೊಮ್ಮೆ ಗಮನಿಸಿ..!!, ರಣಬಿಸಿಲಿನಿಂದ ನಿಮ್ಮ ವಾಹನಕ್ಕೂ ತರಲಿದೆ ಆಪತ್ತು: ಕಾರಣವೇನು?

https://youtu.be/nI2P8jWVlJE?si=kdZIUU2_cjD1Gm_6
Share with Friends
author avatar
News Desk