Latestವಿದೇಶ-International

ಕೀನ್ಯಾ, ತಂಜಾನಿಯಾದಲ್ಲಿ ಧಾರಾಕಾರ ಮಳೆ- 350ಕ್ಕೂ ಹೆಚ್ಚು ಮಂದಿ ಸಾವು, 90 ಜನರು ನಾಪತ್ತೆ

ಕೀನ್ಯಾ (kenya) ಮತ್ತು ತಂಜಾನಿಯಾದಲ್ಲಿ (Tanzania) ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗ್ತಿದ್ದು(Rain) ರಸ್ತೆಗಳೆಲ್ಲ ನದಿಯಂತಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು (People) ಹಾಗೂ ಸಾಕು ಪ್ರಾಣಿಗಳು (Domestic Animals) ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹಕ್ಕೆ ಮನೆಗಳು, ರಸ್ತೆಗಳು ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇನ್ನೂ ಭೀಕರ ಮಳೆಯಿಂದಾಗಿ ಕಿನ್ಯಾದ ಲಕ್ಷಕ್ಕೂ ಅಧಿಕ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು

https://youtu.be/_5LhSqha57I?si=7N1VZ4o_dMwnJxsH

ಅಲ್ಲಿನ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. 90 ಜನರು ಕಾಣೆಯಾಗಿದ್ದಾರೆ. 27500 ಮಂದಿಯನ್ನು ಕ್ಯಾಂಪ್‌ನಲ್ಲಿರಿಸಿ ಆರೈಕೆ ಮಾಡಲಾಗುತ್ತಿದೆ. ಸುಮಾರು 1,90,000 ಜನರು ಪ್ರವಾಹ ಮತ್ತು ಮಳೆಯಿಂದಾಗಿ ಬೀದಿಗೆ ಬಂದಿದ್ದಾರೆ ಎಂದು ತಿಳಿಸಿದೆ.ಇದನ್ನೂ ಓದಿ: ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

Share with Friends
author avatar
News Desk