Crime NewsLatestರಾಜಕೀಯ | Politicsರಾಜ್ಯ-Karnatakaಹಾಸನ-Hassan

ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಹೆಚ್.ಡಿ.ರೇವಣ್ಣ (HD.Revanna) ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್‌ಐಟಿ (SIT) ಅಧಿಕರಿಗಳು, ಹೊಳೆನರಸೀಪುರದ (Holenarsipura) ಅವರ ನಿವಾಸಕ್ಕೆ ಭೇಟಿ ನೀಡಿ ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಡಿವೈಎಸ್‌ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ(Bhavani Revanna) ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

https://youtu.be/ZrH9DHzVksQ?si=EuS-ffQekvHBo5ff

ಸ್ಥಳ ಮಹಜರು ಮಾಡುವ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಪೊಲೀಸರು, ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಹಾಗೂ ಸಬ್‌ಇನ್ಸ್ಪೆಕ್ಟರ್ ಅಜಯಕುಮಾರ್ ಎಸ್‌ಐಟಿ ತಂಡಕ್ಕೆ ಸಹಕಾರ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಮನೆಯಲ್ಲಿದ್ದ ಸಿಪಿಯು, ಮಾನೀಟರ್, ಪ್ರಿಂಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹೆಚ್.ಡಿ. ರೇವಣ್ಣನ ಮನೆ ತಲುಪಿದ ಮನೆ ದೇವರು ಈಶ್ವರನ ಪ್ರಸಾದ

https://youtu.be/Brl4wWq34t0?si=ZmBkKqP_44mPVsyo

ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ರೇವಣ್ಣ ವಿರುದ್ಧ ಆರೋಪಿಸಿರುವ ಮಹಿಳೆಯ ಸಮ್ಮುಖದಲ್ಲಿ, ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಮ್‌ನಲ್ಲಿ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.ಇದನ್ನೂ ಓದಿ: ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ: ಶಿವರಾಮೇಗೌಡ

https://youtu.be/nsYxznc2q9Q?si=ijOtehBMX_c9s-GR
Share with Friends
author avatar
News Desk